ಹಾಲಗಿಮರ್ಡಿ ಗ್ರಾಮದಲ್ಲಿ ಹೆಚ್ಚುವರಿ ಶಾಲಾ ಕೊಠಡಿ ಉದ್ಘಾಟನೆ, ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:
ಗ್ರಾಮೀಣ ಪ್ರದೇಶಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುತ್ತಿದೆ. ಕಳೆದ 4 ವರ್ಷದಲ್ಲಿ ಸಾಕಷ್ಟು ಕೆಲಸಗಳಾಗಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಅವರು ಹಾಲಗಿಮರ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ 5 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ನಗರ ಪ್ರದೇಶಗಳಲ್ಲಿರುವ ಅನೇಕ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ಲಭಿಸುತ್ತಿಲ್ಲ. ಎಲ್ಲ ರೀತಿಯ ಸೌಲಭ್ಯಗಳು ದೊರೆಯುವಂತಾದಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳು ಸಹ ಪ್ರಸ್ತುತದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಅಗತ್ಯದ ಮೂಲಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಶ್ರೀಶೈಲ ನಂದಿಹಳ್ಳಿ, ಯಮನಪ್ಪ ತಳವಾರ, ನಾಗನಗೌಡ ಪಾಟೀಲ, ಚಂದ್ರಗೌಡ ಪಾಟೀಲ, ಬಸನಗೌಡ ಪಾಟೀಲ, ಬಸವರಾಜ ಪಾಟೀಲ, ಗಂಗಪ್ಪ ದನದಮನಿ, ಸುಮಾ ಪಾಟೀಲ, ತಂಗೆವ್ವ ಪೂಜೇರಿ, ಸರೋಜಿನಿ ಪೂಜೇರಿ, ಬಾಬು ಪಾಟೀಲ, ವಿನಾಯಕ ದುಗ್ಗಾಣಿ, ಈರಣ್ಣ ನಂದಿಹಳ್ಳಿ, ನೇತ್ರಾವತಿ, ಚಂಬಯ್ಯ ಕಂಬಿ, ಶೇಖರಗೌಡ ಪಾಟೀಲ ಹಾಗೂ ಶಾಲಾ ಸಿಬ್ಬಂದಿಯ ವರ್ಗದವರು ಉಪಸ್ಥಿತರಿದ್ದರು.
ರಸ್ತೆ ಕಾಮಗಾರಿಗೆ ಭೂಮಿಪೂಜೆ:
ಇದೇ ವೇಳೆ ಹಾಲಗಿಮರ್ಡಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 27 ಲಕ್ಷ ರೂ. ಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು, ಗ್ರಾಮಸ್ಥರ ಸಮ್ಮುಖದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈ ರಸ್ತೆ ನಿರ್ಮಾಣದಿಂದ ಈ ಭಾಗದ ಸಾರ್ವಜನಿಕರ ಹಲವು ದಿನಗಳ ಕನಸು ನನಸಾದಂತಾಗಿದೆ. ಸ್ಥಳೀಯರು ರಸ್ತೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಕಾಳಜಿ ವಹಿಸುವ ಮೂಲಕ ಸೌಲಭ್ಯದ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಶ್ರೀಶೈಲ ನಂದಿಹಳ್ಳಿ, ಯಮನಪ್ಪ ತಳವಾರ, ನಾಗನಗೌಡ ಪಾಟೀಲ, ಚಂದ್ರಗೌಡ ಪಾಟೀಲ, ಬಸನಗೌಡ ಪಾಟೀಲ, ಬಸವರಾಜ ಪಾಟೀಲ, ಗಂಗಪ್ಪ ದನದಮನಿ, ಸುಮಾ ಪಾಟೀಲ, ತಂಗೆವ್ವ ಪೂಜೇರಿ, ಸರೋಜಿನಿ ಪೂಜೇರಿ, ಬಾಬು ಪಾಟೀಲ, ವಿನಾಯಕ ದುಗ್ಗಾಣಿ, ಈರಣ್ಣ ನಂದಿಹಳ್ಳಿ, ನೇತ್ರಾವತಿ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.