ಗೋವಾದಲ್ಲಿ ರಾಜ್ಯಪಾಲರ ಜಂಟಿ ಸಭೆ

ಗೋವಾದಲ್ಲಿ ರಾಜ್ಯಪಾಲರ ಜಂಟಿ ಸಭೆ
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಕಾರವಾರ
ಗೋವಾ ಮತ್ತು ಕರ್ನಾಟಕದ ಗಡಿ ಸಮಸ್ಯೆ ವಿಷಯದ ಕುರಿತು  ಸೆ.17ರಂದು ಉಭಯ ರಾಜ್ಯಗಳ ರಾಜ್ಯಪಾಲರು ಸೇರಿ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ  ಸಭೆ ನಡೆಸಲಿದ್ದಾರೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಈ ಬಗ್ಗೆ  ಮಾಹಿತಿ ನೀಡಿದ್ದು ಗೋವಾದ ಮಡಗಾಂವದಲ್ಲಿ ಇಂದು ಮಧ್ಯಾಹ್ನ ನಡೆಯುವ ಸಭೆಯಲ್ಲಿ ಗೋವಾ ಉತ್ತರ ಜಿಲ್ಲೆ, ಗೋವಾ ದಕ್ಷಿಣ ಜಿಲ್ಲೆ ಮತ್ತು ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌ ಅವರು  ಕಾರವಾರದಲ್ಲಿ ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ ಗೋವಾಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.
ಗೋವಾ ಹಾಗೂ ಕರ್ನಾಟಕದ ಗಡಿ ಸಮಸ್ಯೆ ಕುರಿತು ಚರ್ಚಿಸಲು ಈ ಸಭೆ ನಡೆಯುತಿದೆ ಎಂದು ತಿಳಿದು ಬಂದಿದೆ.