ನೇಣಿಗೆ ಶರಣಾದ ಮೂಡಲಗಿ ಯುವಕ

ನೇಣಿಗೆ ಶರಣಾದ ಮೂಡಲಗಿ ಯುವಕ
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಜನ ಜೀವಾಳ ಜಾಲ ಮೂಡಲಗಿ: ವಿದ್ಯುತ್ ಕಂಬಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದೆ. ರವಿ ರುದ್ರಪ್ಪ ಒಂಟಗೂಡಿ(೩೧) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಕಳೆದ ೮ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರವಿ ಶನಿವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಸಾರ್ವಜನಿಕರು ವಿದ್ಯುತ್ ಕಂಬದಲ್ಲಿ ಶವ ನೋಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.