ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದ ಅಭಿವೃದ್ಧಿಯೇ ನನ್ನ ಗುರಿ : ಲಕ್ಷ್ಮೀ ಹೆಬ್ಬಾಳಕರ್

ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದ ಅಭಿವೃದ್ಧಿಯೇ ನನ್ನ ಗುರಿ : ಲಕ್ಷ್ಮೀ ಹೆಬ್ಬಾಳಕರ್
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಳಗಾವಿ:

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿಯದಂತೆ ಹಂತಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 ಕೆಕೆ ಕೊಪ್ಪ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ 38 ಲಕ್ಷ ರೂ.‌ ವೆಚ್ಚದಲ್ಲಿ  ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ  ಭೂಮಿ ಪೂಜೆಯನ್ನು ನೆರವೇರಿಸಿ, ಮಾತನಾಡಿದರು.
  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗಳಿಗೂ  ದಿನಾಂಕಗಳನ್ನು ನಿಗದಿಪಡಿಸಿ, ಒಂದೊಂದಾಗಿ ಪ್ರಾರಂಭಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಗ್ರಾಮಗಳೂ ಸರ್ವಾಂಗೀಣ ಅಭಿವೃದ್ಧಿ ಕಾಣುವ ನಿಟ್ಟಿನಲ್ಲಿ ಶ್ರಮ ವಹಿಸುತ್ತಿದ್ದೇನೆ  ಎಂದು ತಿಳಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಕಲ್ಲಪ್ಪ ಸಂಪಗಾಂವಿ, ದುಂಡಪ್ಪ ಹಲಕಿ, ಗದಗಯ್ಯ ಹಿರೇಮಠ, ಸಂತೋಷ ಕಂಬಿ, ರಾಮನಗೌಡ ಪಾಟೀಲ, ನಿಂಗಪ್ಪ ತಳವಾರ, ನಿಂಗಪ್ಪ ಹೊನ್ನಿಹಾಳ, ಸೋಮಯ್ಯ ಕಂಬಿ, ನಿಂಗಪ್ಪ ವಾಲಿ, ಬಸವರಾಜ ಡೊಂಗರಗಾವಿ, ಸುವರ್ಣ ಪಾಟೀಲ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.