ಬೆಳಗಾವಿ: ಅಥಣಿ ಶಂಕರ ನಗರದಲ್ಲಿ ರವಿವಾರ ಬೆಳಗ್ಗೆ ಟ್ಯೂಷನ್ ಮುಗಿಸಿ ರಸ್ತೆ ಬದಿಯಲ್ಲಿ ಸಹಪಾಠಿಗಳೊಂದಿಗೆ ಮೂತ್ರ ವಿಸರ್ಜನೆಗೆ ನಿಂತಿದ್ದ ಬಾಲಕನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೃಜನ್ ಸುನೀಲ್ ಭಂಡಗರ (10) ಮೃತ ಬಾಲಕ. ಹಲವು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಥಣಿ ಮಾರ್ಗವಾಗಿ ಕಾರವಾರಕ್ಕೆ ಹೊರಟಿದ್ದ ಸರ್ಕಾರಿ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.