ಬೆಳಗಾವಿ :
ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗಳಾಗಿವೆ.
ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಸಂಚರಿಸುವ ವೇಳೆ ಬಸ್ಸು ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯಾಣ ಬೆಳೆಸುತ್ತಿದ್ದರು. ವಿದ್ಯಾರ್ಥಿಗಳಿಗೆ ಇಂದು ಬಿಎ ಫೈನಲ್ ಪರೀಕ್ಷೆ ಇತ್ತು. ಗಾಯಗೊಂಡವರನ್ನು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.