ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಬ್ಬಿ ಕೆಳಗೆ ಕಾರು ಹಿಂಬದಿಯಿಂದ ನುಗ್ಗಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಕೇಶ್ವರ ಹೊರವಲಯದಲ್ಲಿ ಸೋಮವಾರ ತಡರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ.
ಸಂಕೇಶ್ವರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು, ಬೆಳಗಾವಿ ಕಡೆಯಿಂದ ನಿಪ್ಪಾಣಿ ಕಡೆಗೆ ಕಬ್ಬು ತುಂಬಿ ಸಾಗುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಸಾಗುತ್ತಿದ್ದ ಮಾರುತಿ ಸುಜುಕಿ ಕಾರು ಟ್ರ್ಯಾಕ್ಟರ್ ಡಬ್ಬಿ ಕೆಳಗೆ ನುಗ್ಗಿದೆ.
ದುರ್ಘಟನೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕ ಸ್ಥಳದಲ್ಲೇ ಅಸುನೀಗಿದ್ದರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.


