ಬೆಳಗಾವಿ : ಜಿಲ್ಲಾ ನ್ಯಾಯಾಲಯದಲ್ಲಿ ಕಾನ್ ಸ್ಟೆಬಲ್ ಹುದ್ದೆಗೆ ನಕಲಿ ದಾಖಲೆಗಳನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಇಲ್ಲಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಅರ್ನಕಲ್ ಮೂಲದ ಶಶಿಕಾಂತ ಬಂಡೆಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಕಾನ್ಸ್ಟೆಬಲ್ ಹುದ್ದೆಗೆ 2023 ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.
ಅದರಂತೆ ಶಶಿಕಾಂತ್ ನಕಲಿ ದಾಖಲೆ ಸೃಷ್ಟಿಸಿ ಸಲ್ಲಿಸಿದ್ದ. ಈ ದಾಖಲೆಗಳ ಬಗ್ಗೆ ಅನುಮಾನ ಬಂದ ನಂತರ ನ್ಯಾಯಾಲಯದ ಆದೇಶದಂತೆ ದಾಖಲೆಗಳನ್ನು ಪರಿಶೀಲಿಸಲಾಯಿತು. ದಾಖಲೆಗಳು ನಕಲಿ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಯತೀಶ ದಿವಾಕರ ಮಂಗರ್ಶಿ ಅವರ ವಿರುದ್ಧ ಮಾರ್ಕೆಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.