ಬೆಂಗಳೂರು :
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಜೂ.22 (ಗುರುವಾರ) ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ರಾಜ್ಯದಲ್ಲಿ ವಿದ್ಯುತ್ ಏರಿಕೆ ಮಾಡಿರುವ ನೀತಿ ಖಂಡಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಒಂದು ದಿನದ ಬಂದ್ ಕರೆ ನೀಡಿರುವುದು ಇದೇ ಮೊದಲ ಬಾರಿ.
ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಸಂಸ್ಥೆ ಜೂನ್ 22 ರಂದು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕೈಗಾರಿಕೆಗಳನ್ನು ಬಂದ್ ಮಾಡಬೇಕು ಎಂದು ಕರೆ ನೀಡಿದೆ.