ಬೆಳಗಾವಿ : ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಾರ್ವೇಕರ ಗಲ್ಲಿಯಲ್ಲಿ ನಡೆದಿದೆ.
ಸುಪ್ರಿಯ ಬೈಲೂರು(78)ಮೃತರು. ಅವರು ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ತಗಲಿದ ಸಂದೇಹವಿದ್ದು, ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅನಾಹುತಕ್ಕೆ ಮನೆಯ ಪೀಠೋಪಕರಣ, ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.