This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಮುಚ್ಚಂಡಿಯಲ್ಲಿ ವಿದ್ಯಾರ್ಥಿಯ ಭೀಕರ ಕೊಲೆ A gruesome murder of a student in Mukhandi


 

ಬೆಳಗಾವಿ :
ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ವಿದ್ಯಾರ್ಥಿಯನ್ನು ಕೊಲೆಗೈಯ್ಯಲಾಗಿದೆ. ಶಿವಾಜಿನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ.
ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು 2 ದಿನಗಳ ಹಿಂದೆ ಶಾಲೆಗೆ ಹೋದವನು ಮರಳಿ ಬಂದಿರಲಿಲ್ಲ. ಈ ಬಗ್ಗೆ ಪಾಲಕರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶುಕ್ರವಾರ ಮುಚ್ಚಂಡಿ ಗ್ರಾಮದ ಹೊಲದಲ್ಲಿ ವಿದ್ಯಾರ್ಥಿಯ ಶವ ರೈತರಿಗೆ ದೊರಕಿದೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವದ ಬಳಿ ಇದ್ದ ಶಾಲಾ ಸಮವಸ್ತ್ರ ಮತ್ತು ಗುರುತಿನ ಚೀಟಿ ಗಮನಿಸಿ ಅದನ್ನು ಪಾಲಕರ ಗಮನಕ್ಕೆ ತಂದಿದ್ದಾರೆ.

ಪ್ರಜ್ವಲ್ ಮೈ ಮೇಲೆ ದೊಡ್ಡ ಪ್ರಮಾಣದ ಗಾಯಗಳಾಗಿವೆ. ಕೆಲವು ಕಡೆ ಮಾರಕಾಸ್ತ್ರಗಳಿಂದ ಇರಿಯಲಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದು ಒಳ ಉಡುಪು ಹೊರತುಪಡಿಸಿದರೆ ಬೇರೆ ಬಟ್ಟೆ ಕಳಚಿ ಹಾಕಲಾಗಿದೆ. ಮಾರಿಹಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ


Jana Jeevala
the authorJana Jeevala

Leave a Reply