ಬೆಳಗಾವಿ:
ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ. ನಾಳೆ (ಮಂಗಳವಾರ, ಜ.21 ) ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು (ಗ್ರಾಮೀಣ & ನಗರ) ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ನಗರ ಯೋಜನೆ, ಗ್ರಾಮೀಣ ಯೋಜನೆಯ ಎಲ್ಲಾ ಅಂಗನವಾಡಿಗಳಿಗೂ ಸಹ ರಜೆ ಘೋಷಿಸಿ ಜಿಲ್ಲಾಧಿಕಾರಿ ರೋಷನ್ ಆದೇಶ ಹೊರಡಿಸಿದ್ದಾರೆ.