ಬೆಳಗಾವಿ : ವಿವಾಹ ವಿಚ್ಛೆಧನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ.
ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯದ ಪ್ರಕ್ರಿಯೆ ತರುವಾಯ ಹೊರಗೆ ತೆರಳುತ್ತಿದ್ದ ಪತ್ನಿಯನ್ನು ಮುತ್ತಪ್ಪ ಹಿಂದಿನಿಂದ ಮಚ್ಚಿನಿಂದ ದಾಳಿ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಸವದತ್ತಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಉಪಚಾರಕ್ಕೆ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಮುತ್ತಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.