ರಾಮದುರ್ಗ: ಬಸ್ ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ರಾಮದುರ್ಗ ತಾಲೂಕಿನ ಮೂಲಂಗಿಯಿಂದ ರಾಮದುರ್ಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಬ್ರೇಕ್ ಫೇಲ್ ಆಗಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಭವಿಸಿದೆ.
ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.


