ಬೆಳಗಾವಿ :
ಬೆಳಗಾವಿಯ ವಿಶ್ವನಾಥ ಕತ್ತಿ ದಂತ ಮಹಾ ವಿದ್ಯಾಲಯದಲ್ಲಿ ಮಹಿಳೆಯರಿಗೆ ದಂತ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ಕೋರ್ಸ್ ಆರಂಭಿಸಲಾಗಿದೆ.
ಆರು ತಿಂಗಳ ಅವಧಿಯ ಕೋರ್ಸ್ ಇದಾಗಿದೆ. ಈ ಕೋರ್ಸ್ ಮುಗಿಸಿದವರಿಗೆ ದಂತ ಮಹಾವಿದ್ಯಾಲಯಗಳಲ್ಲಿ ಮತ್ತು ಖಾಸಗಿ ದಂತ ವೈದ್ಯಾಲಯಗಳಲ್ಲಿ ವಿಪುಲ ಉದ್ಯೋಗಾವಕಾಶ ಸಿಗಲಿವೆ. ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ ಎಂದು ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.