ಅಥಣಿ :
ದಿನೇ ದಿನೇ ಬೆಳೆಯುತ್ತಿರುವ ಅಥಣಿ ನಗರವನ್ನು ಮೇಲ್ದರ್ಜೆಗೇರಿಸಲು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇದೀಗ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಅಥಣಿ ಪಟ್ಟಣದ ವ್ಯಾಪ್ತಿ ಹಾಗೂ ಜನಸಂಖ್ಯೆ ಬೆಳವಣಿಗೆ ಹಿನ್ನೆಲೆಯಲ್ಲಿ ಇಲ್ಲಿನ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ಪುರಸಭೆ ಸದಸ್ಯರು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಯವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ದಿ. 23-12-23 ರಂದು ಮನವಿ ಸಲ್ಲಿಸಿದರು.
ಪುರಸಭೆ ಸದಸ್ಯರು ಇತ್ತೀಚೆಗೆ ಈ ಕುರಿತು ಲಕ್ಷ್ಮಣ ಸವದಿಯವರಿಗೆ ಮನವಿ ಸಲ್ಲಿಸಿ, ಚರ್ಚಿಸಿದ್ದರು.