ಹುಬ್ಬಳ್ಳಿ :
ಬೆಳಗಾವಿ ಜಿಲ್ಲೆಯ ಆಮ್ ಆದ್ಮಿ ಪಕ್ಷದ 8 ರಿಂದ 10 ಜನ ಪಕ್ಷ ಸೇರ್ಪಡೆ ವಿಚಾರವಾಗಿ ನನ್ನನ್ನು ಸಂಪರ್ಕಿಸಿದ್ದರು. ಈ ವಿಷಯವನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಬಿಜೆಪಿಯ ಇನ್ನೂ 10 ಮುಖಂಡರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಬಿಜೆಪಿ ನಾಯಕರಿಲ್ಲದ ಪಕ್ಷವಾಗಿದ್ದು ಅಸಮಾಧಾನ ಹೆಚ್ಚುತ್ತಿದೆ. ಬಿಜೆಪಿಯ ಹಲವರು ನನ್ನನ್ನು ಸಂಪರ್ಕದಲ್ಲಿದ್ದಾರೆ ಎಂದು ಅವರು ತಿಳಿಸಿದರು.