ಬೆಳಗಾವಿ : ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಪತ್ನಿ ಪಲ್ಲವಿ ಜೊತೆ ಬೆಳಗಾವಿ ನಗರದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ,ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.