ಗೋಕಾಕ : ದಿ.ಗೋಕಾಕ ಮತ್ತು ಮೂಡಲಗಿ ತಾಲೂಕು ಪ್ರಾಥಮಿಕ ಶಿಕ್ಷಕರ ಪತ್ತಿನ ಸಹಕಾರ ಸಂಘದ ವತಿಯಿಂದ ನೀಡುವ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕರ ಪ್ರಶಸ್ತಿ ನಾರಾಯಣಕೇರಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೀತಾ ಗಾಣಿಗಿ ಅವರಿಗೆ ಲಭಿಸಿದೆ. ಮಕ್ಕಳ ಭವಿಷ್ಯ ನಿರ್ಮಾಣದ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗೀತಾ ಅವರು ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕಿಯಾಗಿ ಮಕ್ಕಳ ಮನಮುಟ್ಟುವಂತೆ ಬೋಧಿಸುತ್ತಿದ್ದಾರೆ. ಕಳೆದೊಂದು ದಶಕದಿಂದ ಅವರು ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಯುವ ಶಿಕ್ಷಕಿಗೆ ಈಗ ಪ್ರಶಸ್ತಿ ಗರಿ : ಶಾಲೆಗೆ ಕೀರ್ತಿ ತಂದ ಶಿಕ್ಷಕಿ
