ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಆಲರ್ಟ್ ನೀಡಲಾಗಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 8 ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 8ರವರೆಗೆ ನಾಲ್ಕು ದಿನವೂ ಯೆಲ್ಲೋ ಆಲರ್ಟ್ ನೀಡಲಾಗಿದೆ. ಆಗಸ್ಟ್ 6 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 8ರವರೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ