ಬೆಳಗಾವಿ :
ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ ಕೊಪ್ಪದ (23 ವರ್ಷ) ಎಂಬ ಯುವಕ ಬುಧವಾರ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಚೇರಿಯಲ್ಲಿ ಇಲ್ಲದ ವೇಳೆ ಈತ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಕೂಡಲೇ ಆತನನ್ನು ಬಿಮ್ಸ್ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ. ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.