ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಐಎನ್ಸಿ) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ರಾಜೀನಾಮೆ ನೀಡಿದ್ದರು. ಇದೀಗ ಅವರನ್ನು ಪಕ್ಷದಿಂದಲೇ ಅಮಾನತು ಮಾಡಲಾಗಿದೆ.


