ಬೆಳಗಾವಿ :
ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವತಿಯಿಂದ ನಡೆದ ಅಂತರ್ ವಲಯ ಯುವಜನೋತ್ಸವ ಸ್ಪರ್ಧೆ-2023 ರಲ್ಲಿ ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಂಜುನಾಥ ಕಿತ್ತೂರು ಕಾರ್ಟೂನ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಮುಜಾಹಿದ್ ಡಿಬೇಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಪ್ರಾಚಾರ್ಯ ಡಾ.ಬಿ. ಜಯಸಿಂಹ, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.