*ACP ಭರಮನಿ ನೇತೃತ್ವದಲ್ಲಿ ಉದ್ಯಮಿ ಮನೆ ಮೇಲೆ ದಾಳಿ*
*ಮೂರು ಕೋಟಿ ರೂ ನಗದು ವಶ; ಮುಂದುವರೆದ ತನಿಖೆ*
ಹುಬ್ಬಳ್ಳಿ: ಸಿಸಿಬಿ ACP ನಾರಾಯಣ ಭರಮನಿ ನೇತೃತ್ವದಲ್ಲಿ ಹುಬ್ಬಳ್ಳಿಯ ಉದ್ಯಮಿಯ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಬರೋಬ್ಬರಿ ಮೂರು ಕೋಟಿ ರೂ ಅಕ್ರಮ ನಗದು ಹಣವನ್ನು ವಶಪಡಿಸಿಕೊಳ್ಳುವ ಮುಲಕ ಖದಿಮರ ಭರ್ಜರಿ ಬೇಟೆಯಾಡಿದ್ದಾರೆ.
ಹುಬ್ಬಳ್ಳಿಯ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿರುವ ರಮೇಶ ಬೋಣಗೇರಿ ಅವರ ಮನೆ ಮೇಲೆ ನಿನ್ನೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.
ರಮೇಶ್ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮೂರು ಕೋಟಿ ಹಣ ಪತ್ತೆಯಾಗಿದೆ ಎಂದು ತಿಳಿದಿದೆ. ಶಾಸಕ ಮಾಡಾಳ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ ಲಂಚ ಪಡೆದ ಪ್ರಕರಣಕ್ಕೂ ಇದಕ್ಕೂ ಸಂಬಂಧವಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸಿಸಿಬಿ ACP ನಾರಾಯಣ ಭರಮನಿ ನೇತೃತ್ವದಲ್ಲಿ ಯಶಸ್ವಿಯಾಗಿ ದಾಳಿ ನಡೆಸಿರುವ ತಂಡಕ್ಕೆ ಇಲಾಖೆ 25000/- ಬಹುಮಾನ ಘೋಷಿಸಿದೆ.