ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರ ಜೊತೆಗೆ ಸೆಲ್ಪಿ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡನಾಡು, ನುಡಿ, ಜಲದ ರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸೆಲ್ಸಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.


