ಬೆಳಗಾವಿ : ಚಿಕ್ಕೋಡಿ ವಿಭಾಗ ವ್ಯಾಪ್ತಿಯ ಹುಕ್ಕೇರಿ ಹಾಗೂ ಸಂಕೇಶ್ವರ ಘಟಕಗಳಿಂದ ಅಮ್ಮಣಗಿಯ ಮಲ್ಲಿಕಾರ್ಜುನ ಜಾತ್ರೆಯ ನಿಮಿತ್ತ ಜ.14ರಿಂದ ಜ. 16ರವರೆಗೆ ಮೂರು ದಿನಗಳ ಕಾಲ ವಿಶೇಷ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಚಿಕ್ಕೋಡಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ವಿ.ಎಂ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಮ್ಮಣಗಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಣ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಪ್ರಯಾಣಿಕರಿಗೆ ಸುವ್ಯವಸ್ಥಿತ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.