ಬೆಳಗಾವಿ :
ಅ.22ರಂದು 4ನೇ ಶನಿವಾರ, ಅ.23 ರಂದು ಭಾನುವಾರ, ಅ.24 ಸೋಮವಾರದಂದು ನರಕ ಚತುರ್ದಶಿ ಮತ್ತು ಅ.26 ರಂದು ಬಲಿಪಾಡ್ಯಮಿ ಸಾರ್ವತ್ರಿಕ ರಜೆಗಳು ಇರುವುದರಿಂದ ಬೆಂಗಳೂರು, ಮುಂಬಯಿ, ಪೂನಾ ಹಾಗೂ ಪಣಜಿಗಳಿಂದ ಬೆಳಗಾವಿ ವಿಭಾಗದ ವ್ಯಾಪ್ತಿಯ ಸ್ಥಳಗಳಿಗೆ ಬರುವ ಪ್ರಯಾಣಿಕರ ಜನದಟ್ಟಣೆಯ ಹೆಚ್ಚಳವನ್ನು ಅವಲೋಕಿಸಿ ಅ.21 ಹಾಗೂ ಅ.22 ರಂದು ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗಾವಿಗೆ ಹೆಚ್ಚಿನ ವಾಹನಗಳನ್ನು ಕಾರ್ಯಾಚರಣೆ ಮಾಡಲು ಮತ್ತು ಹಬ್ಬದ ನಂತರ ಮರಳಿ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಅ.26 ರಂದು ವಿಶೇಷ ಸಾರಿಗೆ ಕಾರ್ಯಾಚರಣೆಯನ್ನು ಮಾಡಲಾಗಿದೆ.
ಪೂನಾ, ಮಂಬಯಿ, ಕೊಲ್ಲಾಪುರಗಳಿಂದ ಬೆಳಗಾವಿ ಕಡೆಗೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ ಅ.19 ರಿಂದ ಅ.31ವರೆಗೆ ಪ್ರಯಾಣಿಕರ ದಟ್ಟಣೆಗೆ ಅನುಸರಿಸಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ಸಾರಿಗೆ ವ್ಯವಸ್ಥೆಯನ್ನು ಸಾರ್ವನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಳಗಾವಿ ವಿಭಾಗ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.