ಬೆಳಗಾವಿ :
ಜಿಲ್ಲೆಯಲ್ಲಿ ಶೇ.95 ಪ್ರತಿಶತ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಬೇಡಿಕೆ ಇರುವ ಸ್ಮಶಾನ ಭೂಮಿಗಾಗಿ ಸರ್ಕಾರಿ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸುವಂತೆ ತಹಶೀಲ್ದಾರರಿಗೆ ಸೂಚಿಸಲಾಗಿದೆ. ತಕ್ಷಣ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸ್ಥಾಪಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಮಶಾನ ಭೂಮಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಮಂಜೂರು ಮಾಡಲು ಹಾಗೂ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿಗೆ ಕ್ರಮ ವಹಿಸಲಾಗಿದೆ.
ಸ್ಮಶಾನ ಭೂಮಿ ಮಂಜೂರು ಕುರಿತು ತಿಳಿಸಲು ಸಂಬಂಧಿಸಿದ ತಾಲೂಕು ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ.
ಬಸ್ತವಾಡ ಗ್ರಾಮದಲ್ಲಿ ಸ್ಮಶಾನ ಭೂಮಿ ಬೇಡಿಕೆ ಇದೆ. ಸರ್ಕಾರಿ ಜಮೀನುಗಳು ಇದ್ದಲ್ಲಿ ಗುರುತಿಸಿ, ಮಂಜೂರು ಮಾಡೂರು ಎಂದು ಸ್ಥಾಪಿಸಲಾಗಿದೆ.
ಬೆಳವಡಿಯಲ್ಲಿ ಸ್ಮಶಾನ ಭೂಮಿ ಖರೀದಿ ಮಾಡಲಾಗಿದೆ. ಸ್ಮಶಾನ ಭೂಮಿ ದೂರ ಇರುವ ಕಾರಣ ಬೇರೆ ಕಡೆಗೆ ಹೋಗಬೇಕು ಎಂದು ಮನವಿಗಳು ಬಂದಿವೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರದ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ನಾಮಕರಣ:
ಆರ್ಪಿಡಿ ವೃತ್ತಕ್ಕೆ ವೀರಮದಕರಿ ನಾಯಕರ ಹೆಸರು ನಾಮಕರಣ ಮಾಡುವ ಕುರಿತು ಸಲಹೆ ಮತ್ತು ಮನವಿಗೆ ಆಹ್ವಾನಿಸಲಾಗಿದೆ. ಅದರಂತೆ ಸದಾ ಲೋಕೋಪಯೋಗಿ ಇಲಾಖೆ ಒಳಪಟ್ಟಿದೆ ಎಂದು ಅಕ್ಷೇಪಣೆ ಬಂದಿದ್ದು, ಮುಂದಿನ ದಿನಗಳಲ್ಲಿ ಇಲಾಖೆಗಳ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ತಿಳಿಸಿದರು.
ನಾಮನಿರ್ದೇಶಿತ ಸದಸ್ಯ ವಿಜಯ ತಳವಾರ ಅವರು ಮಾತನಾಡಿ ಆರ್. ಪಿ.ಡಿ ವೃತ್ತಕ್ಕೆ ವೀರಮದಕರಿ ನಾಯಕನ ಹೆಸರು ನಾಮಕರಣ ಮಾಡುವ ಕುರಿತು ಬಹಳ ವಿಳಂಬವಾಗುತ್ತಿದೆ. ಪ್ರತಿ ಸಭೆಯಲ್ಲಿ ಈ ವಿಷಯದ ಮನವಿಗೆ ಮಾತ್ರ ಸೀಮಿತವಾಗಿದೆ. ಕೂಡಲೇ ಇಲಾಖೆಗಳ ಸಹಕಾರದೊಂದಿಗೆ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಅಂಬೇಡ್ಕರ್ ಉದ್ಯಾನವನ ನಿರ್ಮಾಣಕ್ಕೆ ಪ್ರಸ್ತಾವನೆ:
ಕಳೆದ ಸಭೆಯಲ್ಲಿ ಚರ್ಚಿಸಿದಂತೆ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣ ಪಂಚಾಯತಿ ಯೋಜನೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಉದ್ಯಾನವನ ನಿರ್ಮಾಣಕ್ಕೆ ಸೂಕ್ತ ದಾಖಲೆಗಳೊಂದಿಗೆ ಜಮೀನು ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಚಿಕ್ಕೋಡಿ ಉಪಾಧಿಕಾರಿಗಳು ಪ್ರಕಟಿಸಿದ್ದಾರೆ.
ಎಸ್.ಸಿ/ಎಸ್.ಟಿ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಪ್ರವೇಶ:
ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಪ್ರವೇಶ ನೀಡಲಾಗುತ್ತಿದೆ ಎಂದು ಶಿಕ್ಷಣ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ವಿಜಯ ತಳವಾರ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಪಡೆಯಲು ಸಾಹಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಷ್ಠಿತ ಶಾಲೆಗಳಲ್ಲಿ ಪ.ಜಾತಿ ಪ.ಪಂಗಡಗಳ ಮಕ್ಕಳಿಗೆ ಪ್ರವೇಶ ನೀಡಿರುವ ಕುರಿತು ಸಂಬಂಧಿತ ಶಾಲೆಗಳ ಮಾಹಿತಿ ನೀಡಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಅರ್ಜಿ ಸಲ್ಲಿಸಿದ ಪ್ರವೇಶ ಅರ್ಜಿಗಳನ್ನು ಪರಿಶೀಲಿಸಿ, ಸುಲಭವಾಗಿ ಪ್ರವೇಶವನ್ನು ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ದೌರ್ಜನ್ಯ ಪ್ರಕರಣಗಳು ಬಾಕಿ ಇರದಂತೆ ಸೂಕ್ತ ಕ್ರಮ:
ನಗರ ಪೊಲೀಸ್ ಆಯುಕ್ತರ ಪ್ರಕರಣ 9 ಪ್ರಕರಣಗಳು ದಾಖಲಾಗಿವೆ. ಅದೇ ರೀತಿಯಲ್ಲಿ
ಜಿಲ್ಲಾ ವರಿಷ್ಠಾಧಿಕಾರಿಗಳ ಒಟ್ಟು 22 ಪ್ರಕರಣಗಳು ದಾಖಲಾಗಿವೆ. ಯಾವುದೇ ಪ್ರಕರಣಗಳು ಬಾಕಿ ಇರದಂತೆ ವಿಲೇವಾರಿ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದರು.
ನಾಮನಿರ್ದೇಶಿತ ಸದಸ್ಯ ಅನ್ನಸಾಹೇಬ ಹಂಚಿನಮನಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಉಮಾ ಸಾಲಿಗೌಡರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾಂವಿ, ಎಸ್ಸಿಪಿ ಚಂದ್ರಪ್ಪ ಕಟ್ಟಿಮನಿ, ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು.