ದೆಹಲಿ : ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯವು ಮಂಗಳಕರವಾಗಿದೆ. ಹಾಗಾಗಿ, ಈ ದಿನದಂದು ಹಿಂದೂ ಕುಟುಂಬಸ್ಥರು ವಧು-ವರರ ವಿವಾಹ ಮಾಡುವುದು ವಾಡಿಕೆ.
ಸಾವಿರಾರು ಸಂಖ್ಯೆಯಲ್ಲಿ ಮದುವೆ ಕಾರ್ಯಕ್ರಮ ಜರುಗುತ್ತಿವೆ. ಇದರಿಂದ ಕಲ್ಯಾಣ ಮಂಟಪ, ಹೋಟೆಲ್, ಅಡುಗೆ, ಸಲೂನ್, ಅಲಂಕಾರ, ಆರ್ಕೆಸ್ಟ್ರಾಕ್ಕೆ ಬೇಡಿಕೆ ಹೆಚ್ಚಿದೆ. ಬುಧವಾರ ಒಂದೇ ದಿನ ₹1 ಸಾವಿರ ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ದೆಹಲಿಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಂದಾಜಿಸಿದೆ.
ಔತಣಕೂಟದ ಸಭಾಂಗಣ ಮತ್ತು ಹೋಟೆಲ್ಗಳ ಬಾಡಿಗೆ ದರವು ಶೇ 10ರಿಂದ ಶೇ 15ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
‘ದೆಹಲಿಯಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿಯ ವಹಿವಾಟು ಒಂದೇ ದಿನ ₹200 ಕೋಟಿ ದಾಟಿದೆ.
ಬೆಲೆ ಏರಿಕೆಯಿಂದಾಗಿ ಗ್ರಾಹಕರು ಹಗುರ ಆಭರಣಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿದ್ದಾರೆ’ ಎಂದು ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿನ್ನದ ವ್ಯಾಪಾರಿ ಗುರ್ಮೀತ್ ಅರೋರಾ ಹೇಳಿದ್ದಾರೆ.
ಅದರಲ್ಲೂ ವಿವಾಹ ಸೇರಿದಂತೆ ಇದರ ಶ್ರೇಷ್ಠ ಕೆಲಸಗಳಿಗೆ ಅಕ್ಷಯ ತೃತೀಯ ಅತ್ಯಂತ ಶುಭಕರ ದಿನ ಎಂಬ ಪ್ರತೀತಿ ಇದೆ. ಈ ಕಾರಣಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಒಂದೇ ದಿನ ಸುಮಾರು 21 ಸಾವಿರಕ್ಕೂ ಅಧಿಕ ವಿವಾಹ ನಡೆದಿದೆ ಎಂಬ ಮಾಹಿತಿ ಲಭಿಸಿದೆ.
ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ.
ಬೆಳ್ಳಿ ದರವು ಕೆ.ಜಿಗೆ ₹4 ಸಾವಿರ ಇಳಿಕೆಯಾಗಿದ್ದು, ₹98 ಸಾವಿರ ಆಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹900 ಕಡಿಮೆಯಾಗಿದ್ದು, ₹98,550ರಂತೆ ಮಾರಾಟವಾಗಿದೆ. ಆಭರಣ ಚಿನ್ನದ ದರವು (ಶೇ 99.5 ಪರಿಶುದ್ಧತೆ) ಇಷ್ಟೇ ಪ್ರಮಾಣದಲ್ಲಿ ಇಳಿಕೆಯಾಗಿ, ₹98,100 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಟೊ ವಲಯದ ಮೇಲಿನ ಆಮದು ಸುಂಕ ಕಡಿಮೆ ಮಾಡುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ.