ಹೊಸ ಮಾರ್ಗದಲ್ಲಿ ಕರೆಂಟ್: ಸಾರ್ವಜನಿಕರಿಗೆ ಎಚ್ಚರಿಕೆ
ಬೆಳಗಾವಿ:
ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ 110/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹಾಲಿ ಚಾಲ್ತಿಯಲ್ಲಿರುವ 110/11ಕೆವಿ ಇಟ್ನಾಳ ವಿದ್ಯುತ್ ಉಪಕೇಂದ್ರದವರೆಗೆ ಜೋಡಿ ಗೋಪುರಗಳ ಮೇಲೆ 6.062 ಕಿಮೀ ಉದ್ದದ ಒಂಟಿ ವಿದ್ಯುತ್ ಪಸರಣ ಮಾರ್ಗವನ್ನು ನಿರ್ಮಿಸಲಾಗಿದೆ.
ಸದರಿ 110ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಟ್ನಾಳ, ಮುಗಳಿಹಾಳ ಹಾಗೂ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ. ಸದರಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ದಿನಾಂಕ 15.11.2022 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದು.
ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವು.
ಆದಕಾರಣ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಒಂದುವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ, ಮುಂದೆ ಒದಗಬಹುದಾದ ಅಪಾಯಗಳಿಗೆ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬೆಳಗಾವಿ, ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.