ದೆಹಲಿ :
ಬಹು ನಿರೀಕ್ಷಿತ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ದಿನಾಂಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಿಸಿದ್ದಾರೆ.
2024ರ ಜನವರಿ 1 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಆಗಲಿದೆ ಎಂದು ಅವರು ತ್ರಿಪುರದಲ್ಲಿ ತಿಳಿಸಿದ್ದಾರೆ. 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಆ ವರ್ಷವೇ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನ್ಯಾಯಾಲಯದಲ್ಲಿ ಅಡ್ಡಿಪಡಿಸಿತು. ಸುಪ್ರೀಂಕೋರ್ಟ್ ತೀರ್ಪು ಹೊರಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣ ಆರಂಭ ಮಾಡಿದ್ದರು ಎಂದು ಅಮಿತ್ ಶಾ ಹೇಳಿದ್ದಾರೆ.