ಬೆಳಗಾವಿ :ಅಮೃತ ಕಳಶ ಯಾತ್ರೆ ಬೆಳಗಾವಿಗೆ ಆಗಮಿಸಿದೆ. ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, “ಅಮೃತ ಕಳಸ ಯಾತ್ರೆ”ಯ ವಿಶೇಷ ರೈಲುಗೆ ಹಸಿರು ನಿಶಾನೆ ತೋರಿಸುವ ಮೂಲಕ ಬೆಳಗಾವಿ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಾಗೂ ಕಾರ್ಯಕರ್ತರನ್ನು ಬೀಳ್ಕೊಟ್ಟರು.
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಮೇಯರ್ ಶೋಭಾ ಸೋಮನಾಚೆ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

            
        
        
 
        