ಚಿತ್ರದುರ್ಗ :
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಇಲ್ಲಿಯ ಮುರುಘಾ ಮಠದ ಶ್ರೀಗಳಿಗೆ ಮತ್ತೆ ಬಿಗ್ ಶಾಕ್ ಎದುರಾಗಿದೆ.
ಇದೀಗ ಇನ್ನಿಬ್ಬರು ವಿದ್ಯಾರ್ಥಿನಿಯರು ಮುರುಘಾ ಶ್ರೀಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯ ಸಹಾಯ ಪಡೆದಿರುವ ವಿದ್ಯಾರ್ಥಿನಿಯರು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಶ್ರೀಗಳ ವಿರುದ್ಧ ದೂರು ದಾಖಲಿಸಿದ್ದಾರೆ.