ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಸೂಚಿಸಿದೆ.

 
             
         
         
        
 
  
        
 
    