This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಇಂದು ಸವದತ್ತಿಯಲ್ಲಿ ಆನಂದ ಮಾಮನಿ ಅಂತ್ಯಕ್ರಿಯೆ Ananda Mama's funeral today at Savadatti


 

ಸವದತ್ತಿ :
ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ (56)ಅವರ ಪ್ರಾರ್ಥಿವ ಶರೀರ ಅಕ್ಟೋಬರ್ 23 ರಂದು ಬೆಳಿಗ್ಗೆ 10 ಕ್ಕೆ ಸವದತ್ತಿಗೆ ಆಗಮಿಸಲಿದೆ. ಸವದತ್ತಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 3 ಕ್ಕೆ ಯಡ್ರಾಂವಿ ರಸ್ತೆಯಲ್ಲಿರುವ ಚಂದ್ರಮಾ ಫಾರ್ಮ್ ಹೌಸ್ ನಲ್ಲಿ ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.

ಮೂರು ಸಲ ಅವರು ಸವದತ್ತಿ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.
ಶನಿವಾರ ರಾತ್ರಿ ನಿಧನರಾದ ಮಾಮನಿ ಅವರ
ಪ್ರಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಸವದತ್ತಿಯ ನಿವಾಸಕ್ಕೆ ಕೊಂಡೊಯ್ಯಲು ಬೆಂಗಳೂರಿನಲ್ಲಿ ಸಿದ್ಧತೆ ನಡೆಯುತ್ತಿದೆ. ಇಡೀ ದಿನ ಸಾರ್ವಜನಿಕರು ಹಾಗೂ ಅಭಿಮಾನಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ನಂತರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಆಗಸ್ಟ್ 15 ರಂದು ಅವರು ಚೆನ್ನೈ ಪ್ರತಿಷ್ಟಿತ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ನಂತರ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು.


Jana Jeevala
the authorJana Jeevala

Leave a Reply