ಬೆಳಗಾವಿ : ನವದೆಹಲಿಯ ತಲ್ಕೋಟಾರಾ ಕ್ರೀಡಾಂಗಣದಲ್ಲಿ ಒಬಿಸಿ ಕಾಂಗ್ರೆಸ್ನ ನ್ಯಾಯ ಸಮ್ಮೇಳನದಲ್ಲಿ ಖಾನಾಪುರ ಮಾಜಿ ಶಾಸಕಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಒಬಿಸಿ ಪರವಾದ ಪಕ್ಷವಾಗಿ ಗುರುತಿಸಿಕೊಂಡಿದೆ ಅವರ ಅಭ್ಯುದಯವೇ ನಮ್ಮ ಪಕ್ಷದ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಉದ್ಘಾಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಸ್ಥಾನದ ಮಾಜಿ ಸಿಎಂ ಅಶೋಕ ಗೋಹಲೋಟ್, ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್, ಸಚಿನ್ ಪೈಲಟ್, ಬಿ.ಕೆ. ಹರಿಪ್ರಸಾದ್ ಮತ್ತು ದೇಶದಾದ್ಯಂತ ಅನೇಕ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.