ಸಂಕೇಶ್ವರ : ಉದ್ಯಮಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷರಾಗಿದ್ದ ಅಣ್ಣಾಸಾಹೇಬ ಬಾಬುರಾವ್ ಪರ್ವತರಾವ್ ಶನಿವಾರ ಮಧ್ಯಾಹ್ನ ನಿಧನರಾದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣಾಸಾಹೇಬ ಪರ್ವರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶನಿವಾರ ಮಧ್ಯಾಹ್ನ ಅವರು ನಿಧನ ಹೊಂದಿದ್ದಾರೆ. ಮೃತರು ಶ್ರೀ ದುರದುಂಡೀಶ್ವರ ಅರ್ಬನ್ ಬ್ಯಾಂಕಿನ ಮಾಜಿ ಚೇರಮನ್ ಮತ್ತು ಪುರಸಭೆ ಸದಸ್ಯರಾಗಿ ಕೆಲಸ ಮಾಡಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.