ಬೆಳಗಾವಿ/ಬೆಂಗಳೂರು :ನವೆಂಬರ್ ನಲ್ಲಿ ಅವಧಿ ಮುಕ್ತಾಯವಾಗುತ್ತಿರುವ ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾವಣೆ ದಿನಾಂಕವನ್ನು ಉಪ ಚುನಾವಣಾ ಆಯೋಗ ನಿಗದಿಪಡಿಸಿ ಆದೇಶ ಹೊರಡಿಸಿದೆ.
ನವೆಂಬರ್ ನಲ್ಲಿ ಅವಧಿ ಮುಕ್ತಾಯವಾಗುತ್ತಿರುವ ಗ್ರಾ. ಪಂಚಾಯಿತಿಗಳ
ಚುನಾವಣೆ ದಿನಾಂಕವನ್ನು ಉಪ ಚುನಾವಣಾ ಆಯೋಗ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕು ಹೊಸೂರ, ಯಕ್ಕುಂಡಿ, ಧೂಪದಾಳ, ಮಲ್ಲೂರ(ಕಾಗಿಹಾಳ), ಬಡ್ಲಿ ರಾಯಬಾಗ ತಾಲೂಕಿನ ಜಲಾಲಪುರ.
ಅಗತ್ಯವಾದರೆ ಅಕ್ಟೋಬರ್ 30 ರಂದು ಚುನಾವಣೆ, ಅಕ್ಟೋಬರ್ 31 ರಂದು ಮತ ಎಣಿಕೆ ನಡೆಯಲಿದೆ.
ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ , ವಿವಿಧ ಕಾರಣಗಳಿಂದ ಖಾಲಿ ಇರುವ / ತರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ , 1993 ರ ಪ್ರಕರಣ 3083 ಎ ಮತ್ತು 308 ಎಬಿ ರನ್ವಯ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಿದೆ.
ಸಾರ್ವತ್ರಿಕ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಅನುಬಂಧ -1 ರಲ್ಲಿ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ತಿಳಿಸಲಾಗಿದೆ.