ಬೆಳಗಾವಿ:
ಭಾರತ ಚುನಾವಣಾ ಆಯೋಗವು ಮೇ.7 ರಂದು ಲೋಕಸಭಾ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನಕ್ಕೆ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಚುನಾವಣಾ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಬೆಳಗಾವಿ ಉಪವಿಭಾಗ-2, ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.