ಬೆಳಗಾವಿ: ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ.
ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು. ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ರವಿವಾರವೂ ಬಸ್ ಸಂಚಾರ ಸ್ಥಗಿತ ಮುಂದುವರಿದಿದೆ. ಇದರಿಂದ ಪ್ರಯಾಣಿಕರು ಪರದಾಡಿದರು. ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಸಾತಾರಾ, ಮುಂಬೈ ಮತ್ತಿತರ ಕಡೆ ತೆರಳುವವರು ಬಸ್ ಸಿಗದೆ ಹೈರಾಣಾದರು. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆಗಳ ಬಸ್ಗಳು ತಮ್ಮ ಗಡಿಯವರೆಗೆ ಕಾರ್ಯಾಚರಣೆ ನಡೆಸಿದವು.