ಬೆಂಗಳೂರು :
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಛಲ ತೊಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ 3 ನೇ ಗ್ಯಾರಂಟಿಯನ್ನು ಘೋಷಿಸಿದೆ . ರಾಜ್ಯದ ಬಿಪಿಎಲ್ ಪಡಿತರದಾರರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ . ಸದ್ಯ 7 ಕೆಜಿಅಕ್ಕಿ ಉಚಿತವಾಗಿದ್ದು , ಕಾಂಗ್ರೆಸ್ 3 ಕೆಜಿ ಹೆಚ್ಚಿಸುವ ಭರವಸೆ ನೀಡಿದೆ . ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಈ ಘೋಷಣೆ ಮಾಡಿ ವಿರೋಧ ಪಕ್ಷಗಳಿಗೆ ಸವಾಲು ಹಾಕಿದೆ . ಈ ಹಿಂದೆ ಕಾಂಗ್ರೆಸ್ ರಾಜ್ಯದ ಮಹಿಳೆಯರಿಗೆ ತಿಂಗಳಿಗೆ ರೂ . 2000 , ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿತ್ತು .