ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕ್ರೋಧಿ ನಾಮ ಸಂವತ್ಸರದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು
