ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.26 ರಂದು ಶುಕ್ರವಾರ ಪೂರ್ಣಾವಧಿ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನಲ್ಲಿ ಎರಡು ಪ್ರಮುಖ ಜಿಲ್ಲೆಗಳ ವಿಭಜನೆಯ ಬಗ್ಗೆ ದೊಡ್ಡ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಜೆಟ್ನಲ್ಲಿ ರಾಜ್ಯದಲ್ಲಿ ಹೊಸ ಜಿಲ್ಲೆಗಳ ಘೋಷಿಸುವ ಸಂಭವವಿದ್ದು, ಅದರಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಜಿಲ್ಲೆ ವಿಭಜನೆ ಬಹುತೇಕ ಖಚಿತವಾಗಿದೆ. ಮತ್ತೊಂದು ದೊಡ್ಡ ಜಿಲ್ಲೆಯಾಗಿರುವ ತುಮಕೂರು ಸಹಾ ವಿಭಜನೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಫೆ.8 ರಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ, ಈಗಿರುವ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಈ ಎರಡು ಜಿಲ್ಲೆಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗಳನ್ನು ಅಸ್ತಿತ್ವಕ್ಕೆ ತರಬಹುದು ಎಂಬ ಮಾತು ಬಲವಾಗಿ ಕೇಳಿ ಬರುತ್ತಿದೆ. ಅದೇ ರೀತಿ ತುಮಕೂರು ಜಿಲ್ಲೆ ವಿಭಜಿಸಿ ಮಧುಗಿರಿ ಅಥವಾ ಶಿರಾ ಜಿಲ್ಲೆ ರಚನೆ ಸಾಧ್ಯತೆ ಇದೆ.