ಬೆಂಗಳೂರು: ಅನೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಈಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹಾಲು, ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ, ಈಗ ಈ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರಿಗೆ 2 ರೂ. ಹೆಚ್ಚಳವಾಗಲಿದೆ.
ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದ್ದ ಡೀಸೆಲ್ ದರ ಈಗ ಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಹೆಚ್ಚಿಸಿದೆ.