ಖಾನಾಪುರ: ತಾಲೂಕಿನ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಮುಖ ಮುಖಂಡರು ಕೆ.ಇ.ಬಿ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.
ಚರ್ಚೆಯ ಪ್ರಮುಖ ಅಂಶಗಳು: ರಾತ್ರಿ ವೇಳೆ ವಿದ್ಯುತ್ ಪೂರೈಕೆ, ರಾತ್ರಿ ಸಮಯದಲ್ಲಿ ಸಮರ್ಪಕ ವಿದ್ಯುತ್ ಇಲ್ಲದೆ ರೈತರು ಕೃಷಿ ಚಟುವಟಿಕೆಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ತನ್ನು ಸರಿಯಾಗಿ ಪೂರೈಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸುಟ್ಟ ಟಿಸಿಗಳ ಬದಲಾವಣೆ: ಯಾವ ಯಾವ ಕ್ಷೇತ್ರಗಳಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿವೆಯೋ, ಅಂತಹವುಗಳನ್ನು ಒಂದು ವಾರದ ಒಳಗಾಗಿ ಕಡ್ಡಾಯವಾಗಿ ಬದಲಾಯಿಸಿ ರೈತರಿಗೆ ನೆರವಾಗಬೇಕೆಂದು ಮಾಹಿತಿ ನೀಡಿದರು.
ಪಿಎಂ ಕುಸುಮ ಯೋಜನೆ, ತಾಲೂಕಿನಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಸೋಲಾರ್ ಪಂಪ್ಸೆಟ್ಗಳನ್ನು ವಿತರಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ತಾಲೂಕಿನಿಂದ ಒಟ್ಟು 200ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 100 ಅರ್ಜಿಗಳು ವಿಲೇವಾರಿಯಾಗಿವೆ. ಉಳಿದ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ, ಹೆಚ್ಚಿನ ರೈತರಿಗೆ ಈ ಯೋಜನೆಯ ಲಾಭ ತಲುಪಿಸುವಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಹ ಸಂಚಾಲಕ ಸಿದ್ದು ಪಾಟೀಲ, ಗ್ರಾಮದ ಹಿರಿಯರು, ತಾಲೂಕಿನ ಪ್ರಮುಖರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.


