ಬೆಳಗಾವಿ :
ಸಮಾಜ ಕಲ್ಯಾಣ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧, ಎಸ್.ಸಿ & ಎಸ್.ಟಿ ೨.೫೦ ಲಕ್ಷ ರೂ ಹಾಗೂ ಪ್ರವರ್ಗ ೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ೧ ಲಕ್ಷ ರೂ ಆದಾಯ ಮೀರಿರಬಾರದು.
ವಿದ್ಯಾರ್ಥಿಗಳು ವೆಬ್ ಸೈಟ್ ಅನ್ನು ಸಂಪರ್ಕಿಸಿ ಆನ್ಲೈನ್ನಲ್ಲಿ ಅರ್ಜಿಯನ್ನು ಜುಲೈ.೧೫ ೨೦೨೩ ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಬೈಲಹೊಂಗಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.