ಬೆಳಗಾವಿ :
ಬೆಳಗಾವಿ ಜಿಲ್ಲೆಯ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೨೩-೨೪ನೇ ಸಾಲಿಗೆ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ಸಂಪರ್ಕಿಸಿ ಅಕ್ಟೋಬರ್ ೧೧, ೨೦೨೩ ರವರೆಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ ರೂ.೨.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧.೦೦ ಲಕ್ಷ ಇರಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಸಹಾಯವಾಣಿ ಸಂಖ್ಯೆ:೮೦೫೦೭೭೦೦೦೫ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.