ಬೆಳಗಾವಿ :
೨೦೨೩-೨೪ ನೇ ಸಾಲಿನಲ್ಲಿ ಬೈಲಹೊಂಗಲ,ಕಿತ್ತೂರು ತಾಲೂಕಿನ ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಶಿಷ್ಯವೇತನ ಮಂಜೂರು ಮಾಡಲು ಕರ್ನಾಟಕ ಸರಕಾರವು ಏಕೀಕೃತ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
೧ ರಿಂದ ೧೦ನೇ ತರಗತಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಹುದಾಗಿದೆ. ಹಿಂದಿನ ವರ್ಷಗಳಲ್ಲಿ ಅರ್ಜಿ ಸಲ್ಲಿಸದೇ ಇರುವ ಹಾಗೂ ಈ ವರ್ಷ ೧ ನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅ.೨೦ ೨೦೨೩ ರಳೊಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೈಲಹೊಂಗಲ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.