ಬೆಳಗಾವಿ :
ಪ್ರಸಕ್ತ ಸಾಲಿನ ಇಲಾಖೆಯ ಹೊಲಿಗೆ ಯಂತ್ರ ಯೋಜನೆಯಡಿ ಉಳಿಕೆ ಇರುವ ಹೊಲಿಗೆ ಯಂತ್ರಗಳನ್ನು ಅಕ್ಷರಸ್ಥರಾಗಿರುವ ಶ್ರವಣ ದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಾಖಲಾತಿಗಳು :
ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.40 ರಷ್ಟು ಅಂಗವಿಕಲತೆ), ತಹಸೀಲ್ದಾರ್ ಅವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವಿದ್ಯಾರ್ಹತೆ ಹೊಂದಿರುವ ಬಗ್ಗೆ ಪ್ರಮಾಣ ಪತ್ರ /ಟಿ.ಸಿ.ಆದಾಯ ಮತ್ತು ಜಾತಿ ಪ್ರಮಾಣ ಪತ್ರ. ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ. ಯಾವುದೇ ಮೂಲದಿಂದ ಈ ಸೌಲಭ್ಯ ಪಡೆದಿರುವುದಿಲ್ಲವೆಂಬ ಬಗ್ಗೆ ನೋಟರಿಯಿಂದ ದೃಢೀಕರಿಸಿದ ರೂ. 1೦೦/-ಗಳ ಬಾಂಡ್ ಸಲ್ಲಿಸಬೇಕು.
ಅರ್ಜಿಯನ್ನು ಆಯಾ ತಾಲೂಕಿನ ತಾಲೂಕು ಪಂಚಾಯತ ಕಛೇರಿಯಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ದ್ವಿ ಪ್ರತಿಯಲ್ಲಿ ಮ್ಯಾನುವಲ್ ಅರ್ಜಿ ಯನ್ನು ಜು. 25 ರ ಸಂಜೆ 5 ಗಂಟೆಯವರೆಗೆ ಆಯಾ ತಾಲೂಕುಗಳ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲೂ)ರಿಗೆ ಸಲ್ಲಿಸಬಹುದಾಗಿದೆ.
ತಡವಾಗಿ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೧-೨೪೭೬೦೯೬/೯೭ ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.