ಬೆಳಗಾವಿ : ಬೆಳಗಾವಿ ಜಿಲ್ಲೆಯ
ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗರ್ಶಿಗಳಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಳಗಾವಿ ವಿಭಾಗ, ಬೆಳಗಾವಿ ಸುವರ್ಣ ಸೌಧ ಕಟ್ಟಡ ಪೂರ್ವ ದ್ವಾರ ಪ್ರವೇಶ, ತಳ ಮಹಡಿ, ಕೊಠಡಿ ಸಂಖ್ಯೆ ಟಿ.ಪಿ.೧೪, ಬೆಳಗಾವಿ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 3೦ ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ, ಉಪನಿರ್ದೇಶಕರು ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಹತೆಗಳು: ಅಭ್ಯರ್ಥಿಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿದ್ದು, ಜಾತಿ ಪ್ರಮಾಣ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ತೇರ್ಗಡೆ ಅಥವಾ ಅದರ ಸಮನಾಗಿ ತರಬೇತಿ ಹೊಂದಿದ ಪ್ರಮಾಣ ಪತ್ರ. ಅರ್ಜಿದಾರರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲದೇ ಇರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಪೊಲೀಸ್ ನಿರಾಪೇಕ್ಷಣಾ ಮೂಲ ದೃಢೀಕರಣ ಪತ್ರ ಪಡೆದು ಲಗತ್ತಿಸುವುದು. ಅರ್ಜಿದಾರರು ಕಡ್ಡಾಯವಾಗಿ ಬೆಳಗಾವಿ ಜಿಲ್ಲೆಯವರಾಗಿರಬೇಕು. ವಯಸ್ಸು 21 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.